Ad Widget .

ಪ್ರಮೋದ್ ಮುತಾಲಿಕ್ ವಿರುದ್ದ ಮತ್ತೊಂದು ದೂರು‌ ದಾಖಲು

ಸಮಗ್ರ ನ್ಯೂಸ್: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Ad Widget . Ad Widget .

ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಾದರೆ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಕೋರ್ಟ್ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುವ ಆದೇಶ ಜಾರಿಗೊಳಿಸುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ತುಮಕೂರು ಎಸ್ ಪಿ ದೂರು ನೀಡಲಾಗಿದೆ.

Ad Widget . Ad Widget .

ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *