ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು|

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಖದೀಮರ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿ ಬಂಧಿಸಿದೆ.

Ad Widget ... ..

ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಬಂಧಿತರು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್​ಗೆ ಹೋದಾಗ ಘಟನೆ ನಡೆದಿದೆ.

Ad Widget

ಆರೋಪಿಗಳನ್ನ ಬಂಧಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿಸಿಬಿ ಇನ್ಸ್​ಪೆಕ್ಟರ್ ಮಹೇಶ್ ಪ್ರಸಾದ್, ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಹಲ್ಲೆಯಿಂದ ಪಿಎಸ್‌ಐ ನಾಗೇಂದ್ರ, ಎ ಹೆಚ್ ಸಿ ಸುಧೀರ್ ಪೂಜಾರಿ, ಎಎಸ್‌ಐ ಡೇವಿಡ್ ಗಾಯಗೊಂಡಿದ್ದಾರೆ. ಗಾಯಗೊಂಡ ಆರೋಪಿಗಳನ್ನು ಮತ್ತು ಪೊಲೀಸರನ್ನು ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯಕ್ತ ಎನ್​.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *