ನೆಲ್ಯಾಡಿ: ಟ್ರಾವೆಲ್ಲರ್ ಮೇಲೆ ಉರುಳಿದ ಮರ| ವಾಹನ ಜಖಂ

ಸಮಗ್ರ ನ್ಯೂಸ್: ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

Ad Widget ... ..

ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *