Ad Widget .

ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!!

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್‌ ಗೌಡ ಹಾಗೂ ಕೋಲಾರ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget . Ad Widget .

ಇಷ್ಟಕ್ಕೆ ಬಿಡದೇ ಜೆಡಿಎಸ್ ಕಾರ್ಯಕರ್ತರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.

Ad Widget . Ad Widget .

ಫೇಸ್​ಬುಕ್​ನಲ್ಲಿ ಪ್ರಚಂಡ ಭೈರವ ಹೆಸರಿನ ಖಾತೆಯಿಂದ ತಿಥಿ ಕಾರ್ಡ್​ ಅಪ್​ಲೋಡ್​ ಆಗಿದ್ದು, ಹಲವರಿಗೆ ಟ್ಯಾಗ್​ ಮಾಡಲಾಗಿದೆ. ಈ ಕಾರ್ಡ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂನ್​ 10ರಂದು ನಿಧನರಾಗಿದ್ದಾರೆ, ಜೂನ್​ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ. ಶ್ರೀನಿವಾಸ್​ರ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್​ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಎಚ್​ಡಿಕೆ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನ ಪೂರ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು. ಅಷ್ಟೇ ಅಲ್ಲ, ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

Leave a Comment

Your email address will not be published. Required fields are marked *