Ad Widget .

ಅಡ್ಡ ಮತದಾನದ ಅಡ್ಡ ಪರಿಣಾಮ| ಮಾಜಿ ಸಿಎಂ ಕುಮಾರಸ್ವಾಮಿ ಹೆಸರಲ್ಲೂ ತಿಥಿಕಾರ್ಡ್ ಪೋಸ್ಟರ್ ಮಾಡಿ ವಿಕೃತಿ

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ.

Ad Widget . Ad Widget .

ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು.

Ad Widget . Ad Widget .

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನಪೂರ್ತಿ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು.

ಅಷ್ಟೇ ಅಲ್ಲದೆ ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಇದೀಗ ಮತ್ತೊಂದು ಹಂತಕ್ಕೆ ತಲುಪಿದ್ದು, ಶ್ರೀನಿವಾಸ್ ತಿಥಿ ಕಾರ್ಡ್​ ಮಾಡಿ ಹಂಚಿದ್ದಕ್ಕೆ ಪ್ರತಿಯಾಗಿ ಎಚ್​ಡಿಕೆ ವೈಕುಂಠ ಸಮಾರಾಧನೆಯ ಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾ ಮೂಲಕ ಹಂಚಲಾಗುತ್ತಿದೆ.

ಜೂನ್ 22ರಂದು ಬಿಡದಿಯ ತೋಟದ ಮನೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ತಿಥಿ ಕಾರ್ಯ ಇದೆ ಎಂದು ಕಾರ್ಡ್​ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ದುಃಖತಪ್ತರು ಎಂದು ರಾಧಿಕಾ ಕುಮಾರಸ್ವಾಮಿ ಹೆಸರನ್ನೂ ಹಾಕಲಾಗಿದೆ.

Leave a Comment

Your email address will not be published. Required fields are marked *