Ad Widget .

ಸುಬ್ರಹ್ಮಣ್ಯ: ಒಂದೂವರೆ ತಿಂಗಳ ಬಳಿಕ ಗೋಕಳ್ಳತನ ಆರೋಪಿಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿದ್ದ ದನವನ್ನು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ್ದ ಅಪರಿಚಿತ ಗುಂಪನ್ನು ಸುಬ್ರಹ್ಮಣ್ಯ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ.

Ad Widget . Ad Widget .

ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಆಗಮಿಸಿ ದನವನ್ನು ಕಳ್ಳತನಗೈಯುವ ವಿಫಲ ಯತ್ನದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

Ad Widget . Ad Widget .

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಒಂದೂವರೆ ತಿಂಗಳ ನಂತರ ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ 3 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *