Ad Widget .

ಪುತ್ತೂರು: ಅಪಘಾತದಲ್ಲಿ ಉದ್ಯಮಿ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರೋರ್ವರು ಮೃತಪಟ್ಟ ಘಟನೆ ಪುತ್ತೂರು ಹೊರವಲಯದ ನೆಹರುನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

Ad Widget . Ad Widget .

ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ, ಪುತ್ತೂರು ನಗರದ ಎಂ.ಟಿ. ರಸ್ತೆಯ ಮಹಮ್ಮಾಯಿ ದೇವಸ್ಥಾನದ ಬಳಿ ಶ್ರೀ ದುರ್ಗಾ ಕೀ ಮತ್ತು ಸ್ಟವ್ ರಿಪೇರಿ ಅಂಗಡಿ ಮಾಲಕ ರವೀಂದ್ರ (60) ಎಂದು ಗುರುತಿಸಲಾಗಿದೆ.

Ad Widget . Ad Widget .

ರವೀಂದ್ರ ಅವರು ಮಂಗಳವಾರ ರಾತ್ರಿ ನೆಹರು ನಗರ ಕಡೆಯಿಂದ ಪುತ್ತೂರು ಪೇಟೆ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಬೈಕ್ ನಡುವೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರು ನಗರದ ಮಾಸ್ಟರ್ ಪ್ಲಾನರಿ ಮುಂಭಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರವೀಂದ್ರ ಅವರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *