ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು

ಸಮಗ್ರ ನ್ಯೂಸ್: ಬಾಲಕಿಯೊಬ್ಬಳು ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ.

Ad Widget ... ..

ಮಹಮ್ಮದ್ ಇಂತಯಾಜ್ ಅವರ ಪುತ್ರಿ ಸೆಹರ್ ಇಂತಿಯಾಜ್ (15) ಮೃತಪಟ್ಟ ಬಾಲಕಿ. ಮನೆಯ ಬಾಲ್ಕನಿಯ ಸೈಡ್ ಕರ್ಟನ್ ಅನ್ನು ಕುರ್ಚಿಯ ಮೇಲೆ ಹತ್ತಿ ಸರಿಪಡಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನಳಾಗಿದ್ದಳು.

Ad Widget

ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಬಿಜೈ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *