Ad Widget .

ಜು.18 ರಾಷ್ಟ್ರಪತಿ ಚುನಾವಣೆ| ದೇವೇಗೌಡ ಅಭ್ಯರ್ಥಿ ಸಾಧ್ಯತೆ

ಸಮಗ್ರ ನ್ಯೂಸ್: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿರುವ ಸಮಾನ ಮನಸ್ಕ ಪಕ್ಷಗಳ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿಗೆ ದೇವೇಗೌಡರ ಹೆಸರು ಬಲವಾಗಿ ಕೇಳಿಬಂದಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್‌ ಸೇರಿ ಸುಮಾರು ಹದಿನಾರು ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆ.

Ad Widget . Ad Widget .

ಇದರಲ್ಲಿ ಎಲ್ಲರೂ ದೇವೇಗೌಡರ ಹೆಸರು ಪ್ರಸ್ತಾಪಿಸಿದ್ದಾರೆ. ಹೀಗಾಗಿ, ಬಿಜೆಪಿಗೆ ವಿರುದ್ಧವಾಗಿ ದೇವೇಗೌಡರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಕಂಡುಬರುತ್ತಿದೆ.

Ad Widget . Ad Widget .

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೆಸರು ರಾಷ್ಟ್ರಪತಿ ಹುದ್ದೆಗೆ ಕೇಳಿಬಂದಿತ್ತು. ಆದ್ರೆ ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಎಂದು ಶರದ್‌ ಪವಾರ್‌ ಹೇಳಿದ್ದಾರೆ. ಹೀಗಾಗಿ, ಬೇರೆ ಯಾರಿದ್ದಾರೆ ಎಂದು ನೋಡಿದಾಗ, ಎಲ್ಲರಿಗೂ ಕಾಣಿಸಿದ್ದು ದೇವೇಗೌಡರು ಮಾತ್ರ. ದೇವೇಗೌಡರನ್ನೇ ಅಭ್ಯರ್ಥಿ ಮಾಡುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ.

Leave a Comment

Your email address will not be published. Required fields are marked *