Ad Widget .

ಪತ್ರಕರ್ತ ಗುರುವಪ್ಪ ಬಾಳೆಪುಣಿಗೆ ‘ವಿ.ಎಸ್.ಕೆ’ ಮಾಧ್ಯಮ ಪ್ರಶಸ್ತಿ

ಸಮಗ್ರ ನ್ಯೂಸ್: ಮಾಧ್ಯಮ ಸಂವಹನ ಸಂಸ್ಥೆಯಾದ ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ವತಿಯಿಂದ ನೀಡಲಾಗುವ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, `ಹೊಸ ದಿಗಂತ’ ಕನ್ನಡ ದೈನಿಕದ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಅವರು ಬೆ.ಸು.ನಾ ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

Ad Widget . Ad Widget .

ವಿ.ಎಸ್.ಕೆ.ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಜೂ.26ರಂದು ಪೂರ್ವಾಹ್ನ 10:30ಕ್ಕೆ ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಬಾಳೇಪುಣಿಯವರಿಗೆ ಇತ್ತೀಚೆಗಷ್ಟೇ ರಾಜ್ಯ ಸರಕಾರ ರಾಜ್ಯ ಮಟ್ಟದ ಪ್ರತಿಷ್ಠಿತ `ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ’ ನೀಡಿ ಗೌರವಿಸಿತ್ತು.

Ad Widget . Ad Widget .

ಹೊಸದಿಗಂತ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಬಾಳೇಪುಣಿ, ಪತ್ರಿಕೋದ್ಯಮದಲ್ಲಿ ಒಟ್ಟು 36 ವರ್ಷಗಳ ಅನುಭವ ಹೊಂದಿದ್ದಾರೆ. ಇವರ ವೃತ್ತಿ ಜೀವನದಲ್ಲಿ ಹಲವಾರು ತೆರೆಮರೆಯ ಸಾಧಕರನ್ನು ಪರಿಚಯಿಸಿದ ಕೀರ್ತಿ ಇವರದ್ದು. ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಹೊಸ ದಿಗಂತದ ಮೂಲಕ ಮೊದಲ ಬಾರಿಗೆ ಜಗತ್ತಿಗೆ ಪರಿಚಯಿಸಿದ ಕೀರ್ತಿ ಬಾಳೇಪುಣಿ ಅವರಿಗೆ ಸಲ್ಲುತ್ತದೆ.

Leave a Comment

Your email address will not be published. Required fields are marked *