ಸಮಗ್ರ ನ್ಯೂಸ್ : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.
ನೀವು ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬೇಕಾದರೆ ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ವೆಬ್ ಸೈಟ್‌ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಹೆಸರನ್ನು ಬಳಸಿಕೊಂಡು ಕೂಡ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಫಲಿತಾಂಶ ಹೀಗೆ ವೀಕ್ಷಿಸಿ
1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು