ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಲು ಸಿಎಂ ಬೊಮ್ಮಾಯಿಯವರು ಸಚಿವರಿಗೆ ಹೊಣೆಗಾರಿಕೆ ನೀಡಿದ್ದಾರೆ. ಈ ಹೊಣೆಗಾರಿಕೆಯ ಯಡವಟ್ಟಿನಿಂದ ಆರೋಗ್ಯ ಇಲಾಖೆಯ ಚಾಲಕರೊಬ್ಬರು ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ.
ರಾಜ್ಯ ಆರೋಗ್ಯ ಇಲಾಖೆ ಇತ್ತೀಚಿಕೆ ಬಿಡುಗಡೆ ಮಾಡಿರುವ ವರ್ಗಾವಣೆ ಪಟ್ಟಿಯಲ್ಲಿ, ಚಾಲಕರೊಬ್ಬರನ್ನು, ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲಕರಾಗಿದ್ದ ಶಾಂತವೀರಪ್ಪ ಅವರನ್ನು ವರ್ಗಾವಣೆಗೊಳಿಸಿದೆ. ಚಾಲಕರಾಗಿದ್ದ ಅವರನ್ನು, ಕಲಬುರ್ಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇದ್ದ ವಿಭಾಗೀಯ ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಆರೋಗ್ಯ ಇಲಾಖೆಯಲ್ಲಿ ಚಾಲಕರನ್ನು ಯಾವ ಆಧಾರದ ಮೇಲೆ ಸಹ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿದೆ ಎಂಬುದೇ ಈಗ ಎಲ್ಲರ ಯಕ್ಷ ಪ್ರಶ್ನೆಯಾಗಿದ್ದು, ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಬೇಕಿದೆ.