Ad Widget .

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

Ad Widget . Ad Widget .

ಹೀರಾಬೆನ್ ಮೋದಿ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಗಾಂಧಿನಗರದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ವಡ್ನಗರ್‌ನ ಹಟಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.

Ad Widget . Ad Widget .

ಈ ವಯಸ್ಸಿನಲ್ಲೂ ಹೀರಾಬೆನ್ ಮೋದಿ ಆರೋಗ್ಯವಾಗಿದ್ದಾರೆ. ಅವರು ತಮ್ಮ ಕಿರಿಯ ಮಗ ಪಂಕಜ್ ಮೋದಿ ಜೊತೆಗೆ ಗಾಂಧಿನಗರದಲ್ಲಿ ವಾಸಿಸುತ್ತಿದ್ದಾರೆ.

ಶನಿವಾರ ಬೆಳಿಗ್ಗೆ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಗಾಂಧಿನಗರಕ್ಕೆ ಭೇಟಿ ನೀಡಿದ್ದಾರೆ. ರೈಸನ್ ಪ್ರದೇಶದಲ್ಲಿ 80 ಮೀಟರ್ ರಸ್ತೆಗೆ ಪೂಜ್ಯ ಹೀರಾಬಾಯಿ ಮಾರ್ಗ ಎಂದು ಹೆಸರಿಸಲಾಗಿದೆ. ಜಗನ್ನಾಥ ದೇವಸ್ಥಾನದಲ್ಲಿ ಕುಟುಂಬದಿಂದ ಸಮುದಾಯ ಭೋಜನ ಆಯೋಜಿಸಲಾಗಿದೆ.

Leave a Comment

Your email address will not be published. Required fields are marked *