ಸಮಗ್ರ ನ್ಯೂಸ್: ನಾಳೆ(ಜೂ.20) ಪ್ರಧಾನಿ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದು, ಅಲ್ಲಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಯಲ್ಲಿ ನಾಳೆ ಮಧ್ಯಾಹ್ನ 12ರಿಂದ ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಇನ್ನೂ ಜೂನ್ 21ರಂದು, ಅಂದ್ರೆ, ಮಂಗಳವಾರದಿಂದ ಎಂದಿನಂತೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ನಾಳೆ ಬೆಂಗಳೂರಿಗೂ ಮೋದಿ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೋದಿಯವರ ಭದ್ರತಾ ದೃಷ್ಟಿಯಿಂದ ಅವರು ಹಾದು ಹೋಗಲಿರುವ ಮಾರ್ಗಗಳ ಸುತ್ತಮುತ್ತ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಈ ಕುರಿತು ಶನಿವಾರ ಸರ್ಕಾರಿ ಆದೇಶ ಹೊರಡಿಸಲಾಗಿದೆ.
ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.