Ad Widget .

ಚಿತ್ರೀಕರಣ ವೇಳೆ ಅಪಘಾತ| ನಟ ದಿಗಂತ್ ಗಂಭೀರ

ಸಮಗ್ರ ನ್ಯೂಸ್: ನಟ ದಿಗಂತ್‌ಗೆ ಚಿತ್ರೀಕರಣದ ವೇಳೆ ಅಪಘಾತಕ್ಕೆ ಈಡಾಗಿದ್ದು ಪರಸ್ಥಿತಿ ಗಂಭೀರವಾಗಿದೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದೆ.

Ad Widget . Ad Widget .

ಗೋವಾದಲ್ಲಿ ನಟ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ.

Ad Widget . Ad Widget .

ಗೋವಾದ ಬೀಚ್‌ನಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಆಯತಪ್ಪಿ ತಲೆ ಕೆಳಗಾಗಿ ಬಿದ್ದ ಪರಿಣಾಮ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗುತ್ತಿದೆ.

ಘಟನೆ ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅವರ ಕತ್ತಿನ ಮೂಳೆಗೆ ತೀವ್ರ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿಗಂತ್ ಅವರನ್ನು ಏರ್ ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ತರಲಾಗುತ್ತಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *