Ad Widget .

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.

Ad Widget . Ad Widget .

ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

Ad Widget . Ad Widget .

64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ ಜೂನ್ 20 ರಂದು ಜನಿಸಿದರು. ಇವರು ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರದಲ್ಲಿ 2000 ದಿಂದ 2004 ರವರೆಗೆ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ನ ರಾಜ್ಯಪಾಲೆಯಾಗಿದ್ದರು.

Leave a Comment

Your email address will not be published. Required fields are marked *