Ad Widget .

ರಾಷ್ಟ್ರಪತಿ ಚುನಾವಣೆ| ಯಶವಂತ್ ಸಿನ್ಹಾ ಸ್ಪರ್ಧೆಗೆ ರೆಡಿ!

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆಯುತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಹೇಳಿದ್ದಾರೆ.

Ad Widget . Ad Widget .

ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಆಯ್ಕೆಯಾಗಬೇಕಿದ್ದರೆ ಪಕ್ಷದ ಸದಸ್ಯತ್ವ ತೊರೆಯಬೇಕು ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಆಗ್ರಹಿಸಿದ್ದವು. ಹೀಗಾಗಿ ಪ್ರತಿಪಕ್ಷಗಳ ಸಭೆಗೂ ಮುನ್ನವೇ ಸಿನ್ಹಾ ಅವರು ಟಿಎಂಸಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.

Ad Widget . Ad Widget .

‘ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ಆಭಾರಿಯಾಗಿದ್ದೇನೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ನಾನು ಪಕ್ಷ ತ್ಯಜಿಸಬೇಕಾದ ಅನಿವಾರ್ಯತೆ ಎದುರಾಗಿದೆ. ನನ್ನ ನಿರ್ಧಾರವನ್ನು ಅವರು (ಮಮತಾ) ಗೌರವಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *