ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಗೆ ಬಂದ ಮಂಗಳೂರಿನ ವ್ಯಕ್ತಿ!

ಸಮಗ್ರ ನ್ಯೂಸ್: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜ ಸೇವಕರ ಸಮಯ ಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ.

Ad Widget ... ..

ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು.

Ad Widget

ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕ ಕಾರ್ಯಕರ್ತರು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.

Leave a Comment

Your email address will not be published. Required fields are marked *