Ad Widget .

ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆ| ತೆರೆದು ನೋಡಿದಾಗ ಬೆಚ್ಚಿಬಿದ್ದ ಬೆಳಗಾವಿ ಜನ| ಏನಿತ್ತು ಅದರೊಳಗೆ?

ಸಮಗ್ರ ನ್ಯೂಸ್: ಹಳ್ಳದಲ್ಲಿ ತೇಲಿಬಂದ ಪೆಟ್ಟಿಗೆಯೊಂದರಲ್ಲಿ ಏಳು ಭ್ರೂಣಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

Ad Widget . Ad Widget .

ಭ್ರೂಣಗಳ ಮೃತದೇಹಗಳನ್ನು ಕೀಚಕರು ಹಳ್ಳಕ್ಕೆ ಚೆಲ್ಲಿದ್ದಾರೆ. ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಬಿಡಲಾಗಿದ್ದು, ಶವ ನೋಡಿದ ಜನ ಹೌಹಾರಿದ್ದಾರೆ.

Ad Widget . Ad Widget .

ಒಟ್ಟು ಐದು ಡಬ್ಬಿಗಳಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣಗಳ ಮೃತ ದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಮೃತದೇಹ ಕಂಡು ಮೂಡಲಗಿ ಜನರು ಹೌಹಾರಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ನೀಡಿದ್ದಾರೆ.

ಡಿಎಚ್‌ಒ ಡಾ.ಮಹೇಶ ಕೋಣಿ ಹೇಳಿಕೆ ನೀಡಿದ್ದು, ಮೂಡಲಗಿ ಪಟ್ಟಣದ ಸೇತುವೆ ಕೆಳಗೆ ಐದು ಡಬ್ಬಿಯಲ್ಲಿ ಏಳು ಭ್ರೂಣಗಳು ಪತ್ತೆಯಾಗಿವೆ. ಇದು ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಗಳ ಹತ್ಯೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಭ್ರೂಣಗಳ ಹತ್ಯೆ ಕುರಿತು ತನಿಖೆಗೆ ಒಂದು ತಂಡ ಸಹ ರಚನೆ ಮಾಡಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತಂಡ ರಚನೆ ಮಾಡುತ್ತೇವೆ ಎಂದಿದ್ದಾರೆ.

Leave a Comment

Your email address will not be published. Required fields are marked *