ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮಳೆಯ ಆರ್ಭಟ ಇನ್ನೂ 3 ದಿನಗಳ ಕಾಲ ಮುಂದುವರೆಯಲಿದೆ. ಜೂನ್ 26ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಹೀಗಾಗಿ, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಈಗಾಗಲೇ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಲ್ಲೇ ಈ ಬಾರಿ ಜೂನ್ನಲ್ಲಿ ಅತಿ ಮಳೆಯನ್ನು ಕಂಡಿದೆ.