Ad Widget .

ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ರವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಪ್ರಶಂಸನಾ ಪತ್ರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಅಭಿಯೋಜಕ ಅಧಿಕಾರಿಗಳ ಸಮನ್ವಯ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ವನ್ನು ನೀಡಿ ಗೌರವಿಸಲಾಗಿದೆ.

Ad Widget . Ad Widget .

ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ರವರು ಜನಾರ್ಧನ್ ರವರಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನ್ಯಾಯಾಲಯಗಳ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ಅಭಿಯೋಜಕರು ಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು.
ಸುಳ್ಯ ನ್ಯಾಯಾಲಯದ ಎ ಪಿ ಪಿ ಜನಾರ್ಧನ್ ಅವರ ಸೇವೆಯನ್ನು ಗುರುತಿಸಿ, ವಿವಿಧ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಸರಕಾರದ ಪರವಾಗಿ ವಾದಿಸಿದ ಅವರ ಯಶಸ್ವಿ ಸೇವೆಯನ್ನು ಪರಿಗಣಿಸಿ ಪ್ರಶಂಸಾಪತ್ರವನ್ನು ನೀಡಿ ಗೌರವಿಸಲಾಗಿದೆ.
ಸಭಾ ವೇದಿಕೆಯಲ್ಲಿ ಮಂಗಳೂರು ವಲಯ ಅಭಿಯೋಜನೆ ಇಲಾಖೆಯ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ, ಜಿಲ್ಲಾ ಪ್ರಧಾನ ಸರ್ಕಾರಿ ಅಭಿಯೋಜಕರು ರಾಜು ಪೂಜಾರಿ ಉಪಸ್ಥಿತರಿದ್ದರು.

Ad Widget . Ad Widget .

ಸಭೆಯಲ್ಲಿ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ಗಾನ ಕುಮಾರನ್, ಬಂಟ್ವಾಳ ಎ ಎಸ್ಎಸ್ಪಿ ಶಿವಂ ಸು ರಜಪೂತ್, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ತಾಲೂಕು ವಿವಿಧ ಠಾಣೆ ಗಳ ಪೊಲೀಸ್ ಅಧಿಕಾರಿಗಳು, ನ್ಯಾಯಾಲಯಗಳ ಎಪಿಪಿಗಳು ಪಾಲ್ಗೊಂಡಿದ್ದರು.

Leave a Comment

Your email address will not be published. Required fields are marked *