ಸಮಗ್ರ ನ್ಯೂಸ್: ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಳೆ ಚುರುಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೀದರ್, ಕೊಪ್ಪಳ, ಹಾವೇರಿ ಧಾರವಾಡ ಜಿಲ್ಲೆಯಲ್ಲಿಯೂ ಮಳೆ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಉತ್ತರ ಕರ್ನಾಟಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೀದರ್,ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದು ಗುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕನ್ನಡ,ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿನೀಡಿದೆ.