ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯು ಜೂನ್ 27ರ ಸೋಮವಾರದಿಂದ ಜುಲೈ 4ರವರೆಗೆ ನಡೆಯಲಿದ್ದು, ಈ ಬಾರಿ 94649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ
ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ಅಳವಡಿಸಿಕೊಂಡಿದ್ದ ಮಾರ್ಗಸೂಚಿಯನ್ನೇ ಪೂರಕ ಪರೀಕ್ಷೆಗೂ ಅಳವಡಿಸಿ ಕೊಳ್ಳಲಾಗಿದೆ.
ಜುಲೈ 11ರಿಂದ ಮೌಲ್ಯ ಮಾಪನ ಆರಂಭಿಸಿ ಆಗಸ್ಟ್ ಮೊದಲನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಗುರಿ ಇದೆ ಎಂದು ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.