ಗೆಳೆಯರ ಜೊತೆ ಸೇರಿ ಪತ್ನಿಯನ್ನೇ ಸಾಮೂಹಿಕ ಅತ್ಯಾಚಾರ ಮಾಡಿದ ಭೂಪ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ಕಳೆದ ವರ್ಷ 17 ವರ್ಷದ ಬಾಲಕಿಯನ್ನು ಬೆದರಿಸಿ ಮದುವೆಯಾಗಿದ್ದ ವ್ಯಕ್ತಿ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮದುವೆಯಾದ ನಂತರ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದ ಆರೋಪಿ, ಜೂನ್ 7 ರಂದು ಚಿತ್ರದುರ್ಗ ಹೊರವಲಯಕ್ಕೆ ಕರೆದೊಯ್ದು ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ದೂರು ಕೊಡದಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

ಪತಿ ಹಾಗೂ ಆತನ ಮೂವರು ಸ್ನೇಹಿತರ ವಿರುದ್ಧ ಬಾಲಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *