Ad Widget .

ರಾಜ್ಯದ ಜನತೆಗೆ ಗುಡ್ ನ್ಯೂಸ್; ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಗೆ ಚಿಂತನೆ

ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವು ಜನತೆಗೆ ಇದೀಗ ಗುಡ್ ನ್ಯೂಸ್ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಬಗ್ಗೆ ಮಾಹಿತಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯದಲ್ಲಿ ಅಕ್ಟೋಬರ್ ನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ 6 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾ ಬಾಕಿ ಇದ್ದು, ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

Ad Widget . Ad Widget . Ad Widget .

ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು ಒಳಗೊಂಡ ರಾಜ್ಯದ 1.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

ಯಶಸ್ವಿನಿ ಯೋಜನೆ ಮೂಲಕ ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ ಗುರುತಿಸಿದ 295 ಕಾಯಿಲೆಗಳ 823 ಶಸ್ತ್ರಚಿಕಿತ್ಸೆಗೆ ನಗದು ರಹಿತ ಸೌಲಭ್ಯ ಪಡೆಯಬಹುದು.

ಈ ಮೊದಲಿದ್ದ 905 ಯಶಸ್ವಿನಿ ವರ್ಕ್ ಆಸ್ಪತ್ರೆಗಳನ್ನು 1800 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗ್ರಾಮೀಣ ಯಶಸ್ವಿನಿ ಯೋಜನೆಯಡಿಯಲ್ಲಿ 1 ಬಾರಿ ಚಿಕಿತ್ಸೆಗೆ ಒಳಗಾದರೆ 1.25 ಲಕ್ಷ ರೂ. ಮಿತಿ ಹಾಗೂ ಒಂದಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆಗೆ ಒಳಗಾದರೆ 2 ಲಕ್ಷ ರೂ.ವರೆಗೆ ನಗದು ರಹಿತ ಶಸ್ತ್ರ ಚಿಕಿತ್ಸಾ ಸೌಲಭ್ಯ ಪಡೆಯಬಹುದು ಎನ್ನಲಾಗಿದೆ.

Leave a Comment

Your email address will not be published. Required fields are marked *