Ad Widget .

ನಡುಗಿದ ಸುಳ್ಯ, ಕೊಡಗು| ವರದಿ ಬಿಡುಗಡೆಗೊಳಿಸಿದ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರ| 3.0 ತೀವ್ರತೆಯ ಭೂಕಂಪದ ಕೇಂದ್ರ ಯಾವುದು ಗೊತ್ತಾ?

ಸಮಗ್ರ ನ್ಯೂಸ್: ಇಂದು ಮುಂಜಾನೆ ದ.ಕ ಜಿಲ್ಲೆಯ ಸುಳ್ಯ ಗಡಿಭಾಗ ಮತ್ತು ಕೊಡಗಿನ ಗಡಿ ಪ್ರದೇಶಗಳಲ್ಲಿ ಸಂಭವಿಸಿದ ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬುಲೆಟಿನ್ ಬಿಡುಗಡೆಗೊಳಿಸಿದೆ. ರಿಕ್ಟರ್ ಮಾಪಕದಲ್ಲಿ 3.0 ದಾಖಲಾಗಿದ್ದು, ಭೂಕಂಪದ ಕೇಂದ್ರ ಬಿಂದು ಕೊಡಗು ಜಿಲ್ಲೆಯ ಚೆಂಬು ಗ್ರಾಮ ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳಿಗ್ಗೆ 7 ಗಂಟೆ 45 ನಿಮಿಷ 47 ಸೆಕೆಂಡಿಗೆ ಈ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿಗ್ರಾಮವಾಗಿರುವ ಚೆಂಬುವಿನಿಂದ 5.2 ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 3.೦ ರಷ್ಟು ಭೂಕಂಪನವಾಗಿದೆ. ಇದರ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ವಾಯುವ್ಯದಲ್ಲಿ 8.2 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.4 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 12.1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದೆ. ಹಾಗಾಗಿ ಈ ಪ್ರದೇಶದ 4೦ರಿಂದ 5೦ ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

Ad Widget . Ad Widget . Ad Widget .

ಹೀಗಾಗಿ ಸುಳ್ಯ ತಾಲೂಕಿನ ಬಹುತೇಕ ಕಡೆ ಭೂಮಿ ಕಂಪಿಸಿರುವ ಅನುಭವ ಆಗಿದ್ದು, ಕಂಪನದೊಂದಿಗೆ ಭಾರೀ ಶಬ್ದವೂ ಕೇಳಿಬಂದಿದೆ.

Leave a Comment

Your email address will not be published. Required fields are marked *