ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

ಸಮಗ್ರ ನ್ಯೂಸ್: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ, ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ.

. Ad Widget . Ad Widget . Ad Widget .

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆಗಳು ನಡೆಯುವ ಕಾರಣ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಕೋರಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ಕೋರಿಕೆಯ ಹಿನ್ನಲೆಯಲ್ಲಿ, ಎಲ್ಲಾ ವರ್ಗದ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆ, ತರಗತಿಗಳು ನಡೆಯುತ್ತಿದ್ದಲ್ಲಿ, ಅದನ್ನು ಖಚಿತಪಡಿಸಿಕೊಂಡು, ಒಂದು, ಎರಡು ತಿಂಗಳ ಅವಧಿಗೆ ಅಂದರೇ ಜುಲೈ, ಆಗಸ್ಟ್ -2022ಕ್ಕೆ ನಿಗದಿತ ಮೊತ್ತವನ್ನು ಪಾವತಿಸಿಕೊಂಡು, ರಸೀದಿ ನೀಡುವುದು ಎಂದು ತಿಳಿಸಿದೆ.

ವಿದ್ಯಾರ್ಥಿಗಳು ಹೀಗೆ ಪಡೆದ ರಸೀದಿ ಹಾಗೂ ಹಳೆಯ ಪಾಸ್ ಎರಡನ್ನು ತೋರಿಸಿ, ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲಾ ಚಾಲಕ, ನಿರ್ವಾಹಕ, ತನಿಖಾ ಸಿಬ್ಬಂದಿಗಳು ಕ್ರಮವಹಿಸುವಂತೆ ಸೂಚಿಸಿದೆ.

Leave a Comment

Your email address will not be published. Required fields are marked *