ಸಮಗ್ರ ನ್ಯೂಸ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಂಡ ಉದ್ಯೋಗಿನಿ ಯೋಜನೆಯಲ್ಲಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.50 ಹಾಗೂ ಇತರೆ ವರ್ಗದ ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕಿನಿಂದ ಶೇ.30 ಸಹಾಯಧನ ಪಡೆಯಲು ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಂಬಂಧಿಸಿದ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದು ಜುಲೈ 31ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳನ್ನು ಸಂಪರ್ಕಿಸಬಹುದು.
ಮಾಹಿತಿಗಾಗಿ ದೂ.ಸಂಖ್ಯೆ: ಮಂಗಳೂರು ನಗರ: 0824-2432809, ಮಂಗಳೂರು ಗ್ರಾಮಾಂತರ: 0824-2263199, ಬಂಟ್ವಾಳ: 08255-232465, ವಿಟ್ಲ: 08255-238080, ಪುತ್ತೂರು: 08251-230388, ಸುಳ್ಯ: 08257-230239, ಬೆಳ್ತಂಗಡಿ: 08256-232134 ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ:0824-2451254, 2453071 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.