ಸಮಗ್ರ ನ್ಯೂಸ್: ಮಗುವನ್ನು ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದಿದ್ದು, ತಾಯಿ ಮೃತಪಟ್ಟಿದ್ದಾರೆ.

ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಮಗು ಕೆರೆಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ. ಮನೆಯವರು ಹಾಗೂ ಸ್ಥಳೀಯರ ಸಹಕಾರದಿಂದ ಮಗುವನ್ನು ರಕ್ಷಿಸಲಾಯಿತು ಎಂದು ತಿಳಿದುಬಂದಿದೆ.

















