Ad Widget .

ಬ್ರಹ್ಮಾವರ; ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ತಾಲೂಕಿನ ಉಪ್ಪಿನಕೋಟೆಯ ಸಾಲಿಕೇರಿಯಲ್ಲಿ ನಡೆದಿದೆ.

Ad Widget . Ad Widget .

ಸಾಲಿಕೇರಿಯ ಶಂಕರಪ್ರಭು(82) ಮೃತ ದುರ್ದೈವಿ.

Ad Widget . Ad Widget .

ಶಂಕರ ಪ್ರಭು ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.

ಬಾವಿಗೆ ಬಿದದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ಮೊದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಶಂಕರ ಪ್ರಭು ಅವರ ಮೃತ ದೇಹವನ್ನು ಬಾವಿಯಿಂದ ಹೊರ ತೆಗೆದಿದ್ದಾರೆ.

ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *