ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!!

ಸಮಗ್ರ ನ್ಯೂಸ್ : ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.

Ad Widget ... ..

ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

Ad Widget

ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Leave a Comment

Your email address will not be published. Required fields are marked *