ಸಮಗ್ರ ನ್ಯೂಸ್: ಗ್ರಾಮಸ್ಥರಿಂದ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಸುಳ್ಯ ತಾಲೂಕಿನ ಮರ್ಕಂಜದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಳವುಪಾರೆಯಲ್ಲಿ ನಡೆಸಲಾಗುತ್ತಿರುವ ಗಣಿಗಾರಿಕೆ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಗಣಿಯಿಂದ ಸ್ಥಳೀಯರಿಗೆ ಭಾರೀ ತೊಂದರೆ ಆಗುತ್ತಿದ್ದು ಗಣಿಯನ್ನು ನಿಲ್ಲಿಸಲು ಅಂಬೇಡ್ಕರ್ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಅಧಿಕಾರಿಗಳು ಸ್ಪಂದಿಸಿ ಸ್ಥಳ ಭೇಟಿ ನಡೆಸಿದ್ದಾರೆ.
