ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್| ಯುವಕ ಸಾವು
ಸಮಗ್ರ ನ್ಯೂಸ್: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುಪುರ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೆರೆಕಾಡಿನ ಪ್ರವೀಣ್ ಎಂದು ಗುರುತಿಸಲಾಗಿದೆ.ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಈತ ಇನ್ನೊಂದು ಬೈಕ್ ನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಕಾರಿನಡಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್| ಯುವಕ ಸಾವು Read More »