June 2022

ಸುಳ್ಯ: ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ; ಆತ್ಮಹತ್ಯೆ ಶಂಕೆ!?

ಸಮಗ್ರ ನ್ಯೂಸ್: ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಬಳಿಯ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ ಕಂಡುಬಂದಿದೆ. ಘಟನೆಯನ್ನು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ತನಿಖೆ‌ ನಡೆಸಲಾಗುತ್ತಿದೆ. ಸುಳ್ಯ ಠಾಣೆಯಲ್ಲಿ […]

ಸುಳ್ಯ: ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ; ಆತ್ಮಹತ್ಯೆ ಶಂಕೆ!? Read More »

ಚರಣ್ ರಾಜ್ ಕೊಲೆ ಪ್ರಕರಣ| ಮೂವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಚರಣ್ ರಾಜ್ ರೈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೆಯ್ಯೂರು ಗ್ರಾಮದ ಪಲ್ಲತ್ತಡ್ಕದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿಶೋರ್ ಪೂಜಾರಿ ತಂಡದ ಸಹಚರರಾದ ನರ್ಮೇಶ್ ರೈ,(29), ನಿತಿಲ್ ಶೆಟ್ಟಿ (23), ವಿಜೇಶ್ (22) ಬಂಧಿತ ಆರೋಪಿಗಳು. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ. ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಕಲ್ಲಡ್ಕದ ಕಿಶೋರ್ ಪೂಜಾರಿ ತಂಡ ಹತ್ಯೆ ಮಾಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ

ಚರಣ್ ರಾಜ್ ಕೊಲೆ ಪ್ರಕರಣ| ಮೂವರು ಪೊಲೀಸ್ ವಶಕ್ಕೆ Read More »

ಮಂಗಳೂರು: ಚಾರ್ಜಿಂಗ್ ಗೆ ಇರಿಸಿದ್ದ ಸ್ಕೂಟರ್ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಮಂಗಳೂರಿನಲ್ಲೂ ಚಾರ್ಚ್ ಗೆ ಇಟ್ಟಿದ್ದ ಎಲೆಕ್ಟಿಕ್ ಸ್ಕೂಟರ್ ಬೆಂಕಿಗಾಹುತಿಯಾಗಿದೆ. ನಗರದ ಬೋಂದೆಲ್ ಸಮೀಪದ ಕೆ.ಎಚ್. ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ಸ್ಕೂಟರ್ ಮಾಲಕ ಅದನ್ನು ಚಾರ್ಚ್ ಗೆ ಇಟ್ಟಿದ್ದರು, ಆದರೆ ಸ್ವಲ್ಪ ಸಮಯದಲ್ಲೇ ಸ್ಕೂಟರ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತತ್‌ಕ್ಷಣ ಸ್ಕೂಟರ್‌ ಸ್ಪೋಟಗೊಂಡಿದೆ. ಸ್ಕೂಟರ್‌ನ ಯಂತ್ರಗಳು, ಬಿಡಿಭಾಗಗಳು ಸೇರಿದಂತೆ ಸಂಪೂರ್ಣ ಸ್ಕೂಟರ್‌ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ

ಮಂಗಳೂರು: ಚಾರ್ಜಿಂಗ್ ಗೆ ಇರಿಸಿದ್ದ ಸ್ಕೂಟರ್ ಬೆಂಕಿಗಾಹುತಿ Read More »

ಸುಳ್ಯ: ಯುವಕನ‌ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಯುವಕನೋರ್ವನ‌ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದ ಘಟನೆ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ವೆಂಕಟರಮಣ ಸೊಸೈಟಿಯ ಬಳಿ ಭಾನುವಾರ ರಾತ್ರಿ ಈ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಮೊಗರ್ಪಣೆ ಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ ಶಾಯಿ ಎಂಬವರು ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು

ಸುಳ್ಯ: ಯುವಕನ‌ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ Read More »

ಪ್ರವಾದಿ ಬಗ್ಗೆ ಅವಹೇಳನಕಾರಿ ಟ್ವೀಟ್| ಬಿಜೆಪಿ ವಿರುದ್ದ ತಿರುಗಿ ಬಿದ್ದ ಕತಾರ್|

ಸಮಗ್ರ ನ್ಯೂಸ್: ಬಿಜೆಪಿಯ ಕೆಲ ನಾಯಕರು ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಘಟನೆಗಳನ್ನು ಕತಾರ್ ದೇಶ ತುಸು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ನಿಲುವಿನ ಸ್ಪಷ್ಟನೆ ಕೋರಿ ಕತಾರ್ ಸರಕಾರ ಭಾನುವಾರ ಭಾರತೀಯ ರಾಯಭಾರಿಗೆ ಕರೆ ಮಾಡಿದೆ. ಇದೇ ವೇಳೆ, ಕತಾರ್‌ನ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದ್ದು, ನಾಯಕರ ಟ್ವೀಟ್‌ಗಳು ಭಾರತದ ಸರಕಾರದ ಅಧಿಕೃತ ಹೇಳಿಕೆಗಳೆನಿಸುವುದಿಲ್ಲ ಎಂದು ತಿಳಿಸಿದ್ಧಾರೆ. ಕತಾರ್‌ನ ವಿದೇಶಾಂಗ ಸಚಿವಾಲಯ ಬಿಜೆಪಿ ನಾಯಕರು ಮಾಡಿದ ನಿಂದನಾತ್ಮಕ ಟ್ವೀಟ್ ಕುರಿತು ಆಕ್ಷೇಪ

ಪ್ರವಾದಿ ಬಗ್ಗೆ ಅವಹೇಳನಕಾರಿ ಟ್ವೀಟ್| ಬಿಜೆಪಿ ವಿರುದ್ದ ತಿರುಗಿ ಬಿದ್ದ ಕತಾರ್| Read More »

ಬೆಳ್ತಂಗಡಿ : ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಬಿಡಿಸಲು ಹೋದವ ಗಂಭೀರ

ಸಮಗ್ರ ನ್ಯೂಸ್: ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಾಗಿದ್ದ ವಿಚಾರ ತಿಳಿದು ಹೊರಗಿನ ವ್ಯಕ್ತಿಗಳು ಗಲಾಟೆ ಬಿಡಿಸಲು ಬಂದಾಗ ಅವರಿಗೂ ಹಲ್ಲೆ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಶಾಂತಯ್ಯ ಎಂಬ ವಿದ್ಯಾರ್ಥಿ ಮತ್ತು ಇನ್ನೊಂದು ಗುಂಪಿನ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ನಡೆದಿದ್ದು ಈ ವೇಳೆ ಗಲಾಟೆ ವಿಚಾರ ತಿಳಿದು ಬಿಡಿಸಲು ಬಂದ ಆಟೋ ಚಾಲಕರಿಬ್ಬರಿಗೆ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಹಲ್ಲೆ ಮಾಡಿ ಕೆಳಗೆ ಹಾಕಿ ಕಾಲಿನಿಂದ ಒದ್ದು ಗಂಭೀರ ಹಲ್ಲೆ ಮಾಡಲಾಗಿದೆ.

ಬೆಳ್ತಂಗಡಿ : ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ| ಬಿಡಿಸಲು ಹೋದವ ಗಂಭೀರ Read More »

ಮಂಗಳೂರು : ಹಿಜಾಬ್ ಕುರಿತ ಸುಳ್ಳು ಪ್ರಕರಣ ದಾಖಲು ಆರೋಪಿಸಿ ಪೊಲೀಸರ ವಿರುದ್ದ ಪತ್ರಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಹಿಜಾಬ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಶನಿವಾರ ನಗರದ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಸಿದರು. ಎಸ್ಪಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪತ್ರಕರ್ತರು, ನ್ಯಾಯ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ್ ಸೋನಾವಣೆ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಹರೀಶ್ ರೈ,

ಮಂಗಳೂರು : ಹಿಜಾಬ್ ಕುರಿತ ಸುಳ್ಳು ಪ್ರಕರಣ ದಾಖಲು ಆರೋಪಿಸಿ ಪೊಲೀಸರ ವಿರುದ್ದ ಪತ್ರಕರ್ತರಿಂದ ಪ್ರತಿಭಟನೆ Read More »

ಕಾರ್ಕಳ: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಏಳು ಮಂದಿಯ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ರಸ್ತೆಯ ಮನೆಯೊಂದರಲ್ಲಿ ಮೇ 30 ರಂದು ರಂದು ಹುಟ್ಟುಹಬ್ಬದ ಆಚರಣೆ ವೇಳೆ ತಲವಾರಿನಿಂದ ಕೇಕ್ ಕತ್ತರಿಸಿ ಮತ್ತು ಕೊಡಲಿಗಳನ್ನು ಇಟ್ಟುಕೊಂಡು ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪಡುಬಿದ್ರಿ ನಿವಾಸಿಗಳಾದ ರೌಡಿಶೀಟರ್ ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಮತ್ತು ಶರತ್ ಶೆಟ್ಟಿಯನ್ನು ಬಂಧಿಸಲಾಗಿದೆ. ಕಾಪು ಸಿಐ ಪ್ರಕಾಶ

ಕಾರ್ಕಳ: ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದವರು ಪೊಲೀಸ್ ವಶಕ್ಕೆ Read More »

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಲಿ

ಸಮಗ್ರ ನ್ಯೂಸ್: ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮದು. ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸಿಲ್ಲ. ಜೂನ್‌ 5ರಂದು ಶಾಲೆಗಳಲ್ಲಿ ಸೇರಿದಂತೆ ಹಲವೆಡೆ ಗಿಡಗಳನ್ನು ನೀಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಆದರೆ ಇದು ಇನ್ನೂ ಆಚರಣೆಗೆ ಮಾತ್ರ ಸೀಮಿತವಾಗಿದೆ. ಮಾತ್ರವಲ್ಲದೇ ಪರಿಸರವು ಕೇವಲ ಪರಿಸರ ದಿನಾಚರಣೆಗೆ ಮಾತ್ರವೇ ಸೀಮಿತವಾದಂತಿದೆ. ಜತೆಗೆ ಕೆಲವು ಭಾಷಣಗಳಿಗೆ ಮಾತ್ರ ಸಾಕ್ಷಿಯಾಗಿದೆ. ಈ ದಿನಕ್ಕಿರುವ ಮಹತ್ವವನ್ನು ಪ್ರತಿಯೊಬ್ಬ ವ್ಯಕ್ತಿಯೂ ತಿಳಿಯಬೇಕಾಗಿದೆ. ಇಂದಿನ ದಿನಗಳಲ್ಲಿ ಜೂನ್‌ 5ರಂದು ಮಾತ್ರ ಗಿಡ ನೆಡುವ ಮೂಲಕ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಲಿ Read More »

ನಾಯಕರಿಂದಲೇ ಕಾಂಗ್ರೆಸ್ ‌ಸರ್ವನಾಶ – ಸಚಿವ ಅಂಗಾರ

ಸಮಗ್ರ ನ್ಯೂಸ್: ಆರೆಸ್ಸೆಸ್‌ ಸಿದ್ಧಾಂತ ಹಾಗೂ ದೇಶ ಪ್ರೇಮದ ಬಗ್ಗೆ ಅರಿವಿಲ್ಲದ ಕಾಂಗ್ರೆಸ್‌ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅಧಿಕಾರದ ಆಸೆಯಿಂದ ಒಂದು ವರ್ಗದ ಜನರ ಓಲೈಕೆಗಾಗಿ ಅಸಭ್ಯ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆಯಂತಹ ನಾಯಕರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಸಚಿವ ಎಸ್‌. ಅಂಗಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಡ್ಡಿ ಸುಡುವ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರ ಸಂಸ್ಕೃತಿ ಏನೆಂದು ರಾಜ್ಯದ ಜನತೆಗೆ ತಿಳಿದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

ನಾಯಕರಿಂದಲೇ ಕಾಂಗ್ರೆಸ್ ‌ಸರ್ವನಾಶ – ಸಚಿವ ಅಂಗಾರ Read More »