June 2022

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ

ಸಮಗ್ರ ನ್ಯೂಸ್ : ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರು ಹೊರವಲಯ ತಾಲೂಕಿನ ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಶಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಒಳಗಾದ ಬಿಕಾಂ ವಿದ್ಯಾರ್ಥಿ, ಪ್ರಶಾಂತ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಜಯನಗರದ ವಿಜಯ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದನು. ಕಳೆದ ವಾರದಿಂದ ಕಾಲೇಜಿನಲ್ಲಿ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ. ಕಾಲೇಜಿನ ವಿದ್ಯಾರ್ಥಿಗಳು ಮಾಹಿತಿ […]

ಬಿ.ಕಾಂ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆ Read More »

ಶೀಘ್ರವೇ ಬರಲಿದೆ ಇ-ಪಾಸ್‌ಪೋರ್ಟ್|ಹೇಗಿರಲಿದೆ? ಕೆಲಸ ಹೇಗೆ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸಲು ಹಾಗೂ ಪ್ರಯಣಿಕರ ಡೇಟಾವನ್ನು ಸುರಕ್ಷಿತವಾಗಿಡಲು ಭಾರತ ಸರ್ಕಾರ ಶೀಘ್ರವೇ ಇ-ಪಾಸ್‌ಪೋರ್ಟ್‌ಗಳನ್ನು ಪ್ರಾರಂಭಿಸುವಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರ ಕಳೆದ ವರ್ಷ ಇ-ಪಾಸ್‌ಪೋರ್ಟ್ ಪರಿಕಲ್ಪನೆಯನ್ನು ಪರಿಚಯಿಸಿ, ಶೀಘ್ರವೇ ಅದನ್ನು ಪ್ರಾರಂಭಿಸುವುದಗಿ ತಿಳಿಸಿತ್ತು. ಶುಕ್ರವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಈ ವರ್ಷದ ಅಂತ್ಯದಲ್ಲಿ ಇ-ಪಾಸ್‌ಪೋರ್ಟ್ ಹೊರಬರಲಿದೆ ಎಂದು ತಿಳಿಸಿದ್ದಾರೆ. ಇದು ನಾಗರಿಕರ ಅನುಭವ ಹಾಗೂ ವಿತರಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಚಿಪ್ ಆಧಾರಿತ ಇ-ಪಾಸ್‌ಪೋರ್ಟ್ ಹೊಸ ಪರಿಕಲ್ಪನೆಯಲ್ಲ. 100ಕ್ಕೂ

ಶೀಘ್ರವೇ ಬರಲಿದೆ ಇ-ಪಾಸ್‌ಪೋರ್ಟ್|ಹೇಗಿರಲಿದೆ? ಕೆಲಸ ಹೇಗೆ? ಇಲ್ಲಿದೆ ಮಾಹಿತಿ Read More »

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ. ಇಲ್ಲಿನ ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ Read More »

ಸುಳ್ಯ: ಮತ್ತೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ತಾಲೂಕಿನ ಸುಳ್ಯ ಪಟ್ಟಣ, ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸುರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ,ಗುತ್ತಿಗಾರು ಸೇರಿದಂತೆ ಬಹುತೇಕ ಕಡೆ ಭೂಮಿ ಕಂಪಿಸಿದೆ. 10-15 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದ್ದು, ಜನರು ಭಯಗೊಂಡಿದ್ದಾರೆ. ಕಡಬ ತಾಲೂಕಿನ ಸುಬ್ರಹ್ಮಣ್ಯ,

ಸುಳ್ಯ: ಮತ್ತೆ ಕಂಪಿಸಿದ ಭೂಮಿ Read More »

ಶೌಚಾಲಯ ಕಟ್ಟಡ ನಿರ್ಮಾಣ ಸ್ಥಳ ಬದಲಾವಣೆ ಆರೋಪ| ಅಂಬೇಡ್ಕರ್ ರಕ್ಷಣಾ ವೇದಿಕೆ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ತಾ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಸರಕಾರದಿಂದ ದಲಿತ ಸಮುದಾಯದ ಕಾಲೋನಿಗೆ ಬಂದಿರುವಂತಹ ಅನುದಾನ ಬೇರೆಡೆ ವರ್ಗಾಯಿಸಿ ನಮ್ಮ ಸಮುದಾಯದವರಿಗೆ

ಶೌಚಾಲಯ ಕಟ್ಟಡ ನಿರ್ಮಾಣ ಸ್ಥಳ ಬದಲಾವಣೆ ಆರೋಪ| ಅಂಬೇಡ್ಕರ್ ರಕ್ಷಣಾ ವೇದಿಕೆ ಪ್ರತಿಭಟನೆ Read More »

ವಿಟ್ಲ :ಚೂರಿಯಿಂದ ಇರಿದು ಮಹಿಳೆಯ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಕೊಲೆಗೈದು ಪರಾರಿಯಾದ ಘಟನೆ ಇಲ್ಲಿನ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ. ಮೃತಪಟ್ಟವಳನ್ನು ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ. ಚೂರಿ ಇರಿತದಿಂದ ಮಹಿಳೆಗೆ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಳೆಂದು ತಿಳಿದುಬಂದಿದೆ.

ವಿಟ್ಲ :ಚೂರಿಯಿಂದ ಇರಿದು ಮಹಿಳೆಯ ಬರ್ಬರ ಕೊಲೆ Read More »

ವಿಟ್ಲ : ಮಹಿಳೆಗೆ ಚೂರಿಯಿಂದ ಇರಿದು ಪರಾರಿಯಾದ ಯುವಕ

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ಇಲ್ಲಿನ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ. ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶಕುಂತಲಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಂಡ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ. ಚೂರಿ ಇರಿತಕ್ಕೆ ಕಾರಣ ಯಾವುದೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು

ವಿಟ್ಲ : ಮಹಿಳೆಗೆ ಚೂರಿಯಿಂದ ಇರಿದು ಪರಾರಿಯಾದ ಯುವಕ Read More »

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅವಸ್ಥೆ ಕಂಡು ಹೋಂ ಮಿನಿಸ್ಟರ್ ಗರಂ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದು ಈ ವೇಳೆ ಪೊಲೀಸ್ ಠಾಣೆಗೆ ಟರ್ಪಾಲ್ ಹೊದಿಕೆ ಕಂಡು ಗೃಹ ಸಚಿವರು ಗರಂ ಆದರು. ಹೊಸ ಠಾಣೆ ಕಟ್ಟಡ ಕಾಮಗಾರಿ ವಿಳಂಬಕ್ಕೆ ಆರಗ ಜ್ಞಾನೇಂದ್ರ ಕೋಪಗೊಂಡು ನೂತನ ‌ಕಟ್ಟಡ ನಿರ್ಮಾಣ ಇಂಜಿನಿಯರ್ ಗೆ ಕರೆ ಮಾಡಿ ತರಾಟೆ ತೆಗೆದುಕೊಂಡರು. ಜ್ಞಾನೇಂದ್ರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು. 2017ರಲ್ಲೇ ಸರ್ಕಾರ ಹೊಸ ಠಾಣೆ ಕಟ್ಟಡ

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅವಸ್ಥೆ ಕಂಡು ಹೋಂ ಮಿನಿಸ್ಟರ್ ಗರಂ Read More »

SDA ಹುದ್ದೆಗಳ ನೇಮಕಾತಿ ಗೆ ಅರ್ಜಿ ಅಹ್ವಾನ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಿಸಲಾಗಿದ್ದು, 155 SDA ಹುದ್ದೆಗಳ ನೇಮಕಾತಿಗೆ ಜುಲೈ 11 ರಿಂದ ಆಗಸ್ಟ್ 10 ರ ವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿ ನಡೆಸುವ 10 ಪ್ಲಸ್ ಪರೀಕ್ಷೆ ಅಥವಾ ನ್ಯಾಷನಲ್

SDA ಹುದ್ದೆಗಳ ನೇಮಕಾತಿ ಗೆ ಅರ್ಜಿ ಅಹ್ವಾನ Read More »

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ

ಸಮಗ್ರ ನ್ಯೂಸ್: ಮೈಸೂರಿನ ಒಡೆಯರಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ Read More »