Ad Widget .

3 ವರ್ಷದ ಮಗುವಿನ ಕತ್ತು ಹಿಸುಕಿ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಮಗುವಿನ ಕತ್ತು ಹಿಸುಕಿ ಕೊಂದು ನಂತರ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

Ad Widget . Ad Widget .

ಉಡುಪಿಯ ಬ್ರಹ್ಮಾವರ ನಿವಾಸಿ ಆದರ್ಶ್‌ ಅವರ ಪತ್ನಿ ದೀಪಾ (೩೧) ಹಾಗೂ ಮೂರುವರೆ ವರ್ಷದ ಹೆಣ್ಣು ಮಗು ರಿಯಾ ಮೃತಪಟ್ಟಿದ್ದಾರೆ.

Ad Widget . Ad Widget .

ರಾಜರಾಜೇಶ್ವರಿ ನಗರ ಚನ್ನಸಂದ್ರದ ಅಪಾರ್ಟ್‌ ಮೆಂಟ್‌ ನಲ್ಲಿ ದಂಪತಿ ಮದುವೆ ಆದಾಗಿನಿಂದ ವಾಸವಿದ್ದರು.

ಒಂದು ವಾರದಿಂದ ಹೊಟ್ಟೆ ನೋವು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಾ ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2017 ರಲ್ಲಿ ಆದರ್ಶ್‌ ಎಂಬವರನ್ನು ವಿವಾಹವಾಗಿದ್ದ ದೀಪಾ ಅನಾರೋಗ್ಯದಿಂದ ಚೇತರಿಸಿಕೊಳ್ಳದ ಕಾರಣ ಈ ನಿರ್ಧಾರ ಕೈಗೊಂಡಿರಬಹುದು.

ಪತಿ ಆದರ್ಶ್‌ ಸಾಫ್ಟ್‌ ವೇರ್‌ ಇಂಜಿನಿಯರ್‌ ಆಗಿದ್ದು, ಅವರ ಮೇಲೆ ಯಾವುದೇ ದೂರು ದಾಖಲಾಗಿಲ್ಲ ಎಂದು ಡೆತ್‌ ನೋಟ್‌ ನಲ್ಲಿ ಬರೆದಿದ್ದಾರೆ.

Leave a Comment

Your email address will not be published. Required fields are marked *