Ad Widget .

ಊರಿಗೆ ಹಬ್ಬಕ್ಕೆಂದು ತೆರಳಿದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕದಿಮರು

ಸಮಗ್ರ ನ್ಯೂಸ್ : ಮನೆ ಬೀಗ ಮುರಿದು ಕಳ್ಳರು ತಮ್ಮ ಕೈ ಚಳಕ ತೋರಿಸಿದ ಘಟನೆಯೊಂದು ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ನಡೆದಿದೆ.

Ad Widget . Ad Widget .

ಕನಗ್ ರತಿನಾಮ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಊರ ಹಬ್ಬಕ್ಕೆಂದು 2 ದಿನ ತಮಿಳುನಾಡಿಗೆ ತೆರಳಿದ್ದ ವೇಳೆ ಘಟನೆ ನಡೆದಿದ್ದು, ವಾಪಸ್ ಮನೆಗೆ ಬಂದು ನೋಡಿದ್ದಾಗ ದಂಪತಿ ಶಾಕ್ ಆಗಿದ್ದಾರೆ.

Ad Widget . Ad Widget .

ಮನೆಯಲ್ಲಿದ್ದ 30 ಗ್ರಾಂ ಚಿನ್ನಾಭರಣ, ಒಂದು , ದಾಖಲೆ ಪತ್ರಗಳನ್ನು ಕದ್ದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ.

ದಂಪತಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *