ದನಗಳನ್ನು ಕದ್ದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ದನಗಳನ್ನು ಕದ್ದು ಕೊಂಡೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಹಾಗೆಯೇ ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ದನದ ಮಾಂಸವನ್ನು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ.

Ad Widget ... ..

ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ.

Ad Widget

ಮಹಮ್ಮದ್ ಎಂಬಾತ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ ಠಾಣಾ ಪೊಲೀಸರ ತಂಡ ಇಂದು ಮುಂಜಾನೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *