ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು

ಸಮಗ್ರ ನ್ಯೂಸ್: ನೂಪರ್ ಶರ್ಮಾ ಬೆಂಬಲಿಸಿದ್ದ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂಪರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿರುವ ವಿಚಾರ ವರದಿಯಾಗಿದೆ.

. Ad Widget . Ad Widget

ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದ್ದು, ಹೀಗಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ.

. Ad Widget . . Ad Widget . Ad Widget

ಜೂನ್ 21 ರಂದು ಅಮರಾವತಿ ಜಿಲ್ಲೆಯಲ್ಲಿ 54 ವರ್ಷದ ಉಮೇಶ್ ಪ್ರಹ್ಲಾದರಾವ್ ಅವರನ್ನು ಹತ್ಯೆ ಮಾಡಲಾಗಿತ್ತು. ಟಿವಿ ಚರ್ಚೆಯಲ್ಲಿ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಪ್ರತಿಭಟನೆ ಮತ್ತು ಜಾಗತಿಕ ಖಂಡನೆಗೆ ಕಾರಣವಾದ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ಗೆ ಪ್ರತೀಕಾರವಾಗಿ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಅವರನ್ನು ಕೊಲ್ಲಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ

Leave a Comment

Your email address will not be published. Required fields are marked *