Ad Widget .

ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ಸಾವು

ಸಮಗ್ರ ನ್ಯೂಸ್ : ಧಾರವಾಡ ಹೊರವಲಯದ ಯರಿಕೊಪ್ಪ ಬೈಪಾಸ್‌ನಲ್ಲಿ ಬೆಳಗ್ಗಿನ ವೇಳೆ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

Ad Widget . Ad Widget .

ಈ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಲಾರಿ ಚಾಲಕರ ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಗುರುತು ಸಿಗುತ್ತಿಲ್ಲ.

Ad Widget . Ad Widget .

ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *