Ad Widget .

ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಯಜಮಾನನಿಗೆ ಟ್ಯಾಪಿಂಗ್ ಕತ್ತಿಯಿಂದ ಇರಿದು ಪರಾರಿ

ಸಮಗ್ರ ನ್ಯೂಸ್ : ಅತಿಥಿಯಾಗಿ ವ್ಯಕ್ತಿಯ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯೊಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು‌ ಎಂಬಲ್ಲಿ ನಡೆದಿದೆ.

Ad Widget . Ad Widget .

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ.

Ad Widget . Ad Widget .

ಕೇರಳ ಮೂಲದ ಲೂಕೋಸ್ ಎಂಬವರು ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ದಂಪತಿಗಳು ವಾಸವಾಗಿದ್ದರು.

ಆದರೆ ಕಳೆದ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದರು.

ವಾರದ ಹಿಂದೆ ಲೂಕೋಸ್ ಅವರ ಮನೆಗೆ ಅತಿಥಿಯೊಬ್ಬ ಬಂದಿದ್ದು, ಇವರ ಮನೆಯಲ್ಲೇ ವಾಸವಾಗಿದ್ದ.‌ ಇಂದು ಮುಂಜಾನೆ ವೇಳೆ ಗುತ್ತಿಗಾರಿಗೆ ತೆರಳಿದ್ದು, ಬಳಿಕ ಮನೆಗೆ ವಾಪಾಸಾಗಿದ್ದರು.

ಮಧ್ಯಾಹ್ನ 3-4 ಗಂಟೆ ವೇಳೆಗೆ ಅತಿಥಿಯಾಗಿ ಮನೆಗೆ ಬಂದಿದ್ದಾತ ರಬ್ಬರ್ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಲೂಕೋಸ್ ಅವರಿಗೆ ನಾಲ್ಕೈದು ಬಾರಿ ಇರಿದಿದ್ದು, ಬಳಿಕ ಪರಾರಿಯಾಗಿದ್ದಾನೆ‌.

ಗಾಯಗೊಂಡ ಲೂಕೋಸ್ ಪಕ್ಕದ ಮನೆಗೆ ಓಡಿಹೋಗಿದ್ದು, ಬಳಿಕ ಅಲ್ಲಿ ಗಾಯಗೊಂಡಿದ್ದ ಆತ ಕುಸಿದುಬಿದ್ದಿದ್ದ. ಬಳಿಕ ಸ್ಥಳೀಯರು ಪೋಲಿಸರಿಗೆ ಕರೆ ಮಾಡಿದ್ದು, ಕೂಡಲೇ ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಅವರು ಯುವ ತೇಜಸ್ಸು ಅಂಬ್ಯುಲೆನ್ಸ್ ಜೊತೆ ಘಟನೆ ನಡೆದ ಸ್ಥಳಕ್ಕೆ ಬಂದರು .‌

ನಂತರ ಗಾಯಗೊಂಡ ಲೂಕೋಸ್ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಚೂರಿ ಇರಿದು ಪರಾರಿಯಾದ ಆರೋಪಿ ಪತ್ತೆಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *