Ad Widget .

ಬೆಳ್ತಂಗಡಿ: ಸರ್ಕಾರಿ ಬಸ್ ನಲ್ಲಿ ಭಿನ್ನಕೋಮಿನ ಅಪ್ರಾಪ್ತ ಜೋಡಿ| ಕೊಕ್ಕಡದಲ್ಲಿ ಸಿಕ್ಕಿಬಿದ್ದವರು ಧರ್ಮಸ್ಥಳ ಪೊಲೀಸ್ ವಶ

ಸಮಗ್ರ ನ್ಯೂಸ್: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ಸೊಂದರಲ್ಲಿ ಭಿನ್ನಕೋಮಿನ ಇಬ್ಬರು ಅಪ್ರಾಪ್ತ ಜೋಡಿಯನ್ನು ಸೋಮವಾರ ರಾತ್ರಿ ಕೊಕ್ಕಡದಲ್ಲಿ ಬಸ್ ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆಹಚ್ಚಿ ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ.

Ad Widget . Ad Widget .

ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ವ್ಯಾಪ್ತಿಯ ಅಪ್ರಾಪ್ತ ಒಂದೇ ಕಾಲೇಜಿನ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಸೋಮವಾರ ಸಂಜೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ರಾತ್ರಿ ವಾಪಸ್ ಬಸ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಕೊಕ್ಕಡದಲ್ಲಿ ಬಸ್ ತಡೆದು ಜೋಡಿಯನ್ನು ಹಿಡಿದಿದ್ದಾರೆ.

Ad Widget . Ad Widget .

ಧರ್ಮಸ್ಥಳ ಪೊಲೀಸರು ಬೆಂಗಳೂರು ದೇವನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಅಲ್ಲಿಂದ ಹೆತ್ತವರ ಜೊತೆ ಪೊಲೀಸರು ಕೂಡ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *