ನಿರಂತರ ಮಳೆ; ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ‌ ಶಾಲಾ ಕಾಲೇಜಿಗೆ ರಜೆ; ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ Whats ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ನಾಳೆ(ಜು.7) ರಜೆ ಘೋಷಣೆ ಮಾಡಲಾಗಿದೆ.

Ad Widget ... ..

ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜುಲೈ ೭ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಜೆಯ ಅವಧಿಯನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Ad Widget

Leave a Comment

Your email address will not be published. Required fields are marked *