Ad Widget .

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು.

Ad Widget . Ad Widget .

“ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ರಾಜ್ಯಸಭೆ ಸದಸ್ಯ ಜಗ್ಗೇಶ್ ಹೇಳಿದರು.

Ad Widget . Ad Widget .

ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ವಿಡಿಯೋವನ್ನು ನಟ ಹಾಗೂ ಮೇಲ್ಮನೆ ಸದಸ್ಯ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Leave a Comment

Your email address will not be published. Required fields are marked *