Ad Widget .

ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್| ಜು.12ರವರೆಗೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜು.7 ರಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು. ಆದರೇ ಇದೀಗ ಜು.10 ರವರೆಗೆ ಮುಂದುವರಿಯಲಿದೆ. ಈ ವೇಳೆ ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.11, 12 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ , ಪ್ರವಾಸಿಗರು ನದಿ ಹಾಗೂ ಸಮುದ್ರಕ್ಕೆ ತಗ್ಗು ಪ್ರದೇಶದತ್ತ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Leave a Comment

Your email address will not be published. Required fields are marked *