ದ.ಕ ದಲ್ಲಿ ಮುಂದುವರಿದ ವರುಣಾರ್ಭಟ| ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಜು.11ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 11 ರಂದು‌ ಸೋಮವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Ad Widget ... ..

ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

Ad Widget

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *