Ad Widget .

ಜಲಪ್ರಳಯ ಭೀತಿ| ಕೊಡಗಿನ ಶಾಲಾ ಕಾಲೇಜುಗಳಿಗೆ ಜು.11ರಂದು ರಜೆ ಘೋಷಿಸಿಲ್ಲ – ಡಿಸಿ ಸ್ಪಷ್ಟನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮತ್ತು ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈ 11 ರಂದು‌ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌ ಎಂಬ ಸಂದೇಶ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ಹೊರಡಿಸಿದೆ.

Ad Widget . Ad Widget .

ಇಂತಹ ಸುದ್ದಿಗಳನ್ನು ಹರಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.

Ad Widget . Ad Widget .

ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ‌ಭಾಗಮಂಡಲ‌ ಸಂಪೂರ್ಣ ಜಲಾವೃತಗೊಂಡಿದೆ.

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಪ್ರವಾಹ, ಗುಡ್ಡಕುಸಿತ ಸಂಭವಿಸಿರುವ ವರದಿಯಾಗಿದೆ.

Leave a Comment

Your email address will not be published. Required fields are marked *