Ad Widget .

ಮಂಗಳೂರು: ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ನಾಳೆ (ಜು.12) ಸಿಎಂ ಭೇಟಿ

ಸಮಗ್ರ ನ್ಯೂಸ್: ಭಾರೀ ಮಳೆ ಸುರಿಯುತ್ತಿರುವ ಕರಾವಳಿ ಜಿಲ್ಲೆಗಳ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಲಿದ್ದಾರೆ.

Ad Widget . Ad Widget .

ಮಳೆ ಪೀಡಿತ ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

Ad Widget . Ad Widget .

ಜು. 12ರ ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ಆ ಬಳಿಕ ಜು. 14 ಕಾರವಾರಕ್ಕೆ ಭೇಟಿ ನೀಡುತ್ತೇನೆ. ರಾಜ್ಯದ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ತೀವ್ರವಾಗಿ ಮಳೆ ಸುರಿಯುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Leave a Comment

Your email address will not be published. Required fields are marked *