ಹಾಸನ: ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಭಾರೀ ಮಳೆ‌ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯ ಅರಕಲಗೂಡು, ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ‌ಆರ್. ಗಿರೀಶ್ ರಜೆ ಘೋಷಿಸಿದ್ದಾರೆ.

Ad Widget ... ..

ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ.ಮರಗಳು ಬಿದ್ದಿರುವ ಘಟನೆ ನಡೆದಿವೆ. ಇನ್ನೊಂದೆಡೆ ಅರಕಲಗೂಡು ತಾಲ್ಲೂಕಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಈ ಮೂರು ತಾಲ್ಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

Ad Widget

ಹಾಸನ, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ತಾಲ್ಲೂಕುಗಳಲ್ಲಿ ಎಂದಿನಂತೆ ಶಾಲೆ-ಕಾಲೇಜು ತರಗತಿಗಳು ನಡೆಯಲಿವೆ.

Leave a Comment

Your email address will not be published. Required fields are marked *