ದಾಖಲೆಯ ಮಳೆಗೆ ನಲುಗಿದ ಕರಾವಳಿ| 8 ಪ್ರದೇಶಗಳಲ್ಲಿ ಬರೊಬ್ಬರಿ 100 ಮೀ.ಮೀ ಮಳೆ‌!

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. 24 ಗಂಟೆಗಳಲ್ಲಿ 8 ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗೂ ಹೆಚ್ಚಿನ ಮಳೆಯಾಗಿದ್ದು, ಕರಾವಳಿ ಬೆಚ್ಚಿ ಬಿದ್ದಿದೆ.

Ad Widget ... ..

ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ಪ್ರದೇಶದಲ್ಲಿ 152.4 ಮಿಲಿಮೀಟರ್ ಮಳೆಯಾಗಿದೆ.

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ 159.8 ಮಿಲಿಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟ ವ್ಯಾಪ್ತಿಯಲ್ಲಿ 118.8 ಮಿಲಿ ಮೀಟರ್ ಮಳೆಯಾಗಿದೆ. 7 ಪ್ರದೇಶಗಳಲ್ಲಿ 80 ಮಿಲಿಮೀಟರ್ ನಿಂದ 100 ಮಿ.ಮೀ.ವರೆಗೆ ಮಳೆಯಾಗಿದೆ. ಕುಂದಾಪುರ, ಬೆಳ್ತಂಗಡಿ, ಮಾನಕಿ, ಪಣಂಬೂರು, ಗೋಕರ್ಣ, ಸುಳ್ಯ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 92.5 ಮಿಲಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 80.4 ಮಿಲಿ ಮೀಟರ್ ಮಳೆಯಾಗಿದೆ. ಮಂಗಳೂರಿನಲ್ಲಿ 87.5 ಮಿಮೀ, ಸುಳ್ಯ 75.6 ಕುಮಟಾ ತಾಲೂಕಿನ ಗೋಕರ್ಣದಲ್ಲಿ 80.3 ಮಿಲಿಮೀಟರ್ ಮಳೆಯಾಗಿದೆ ಎಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುನ್ಸೂಚನೆ: ಈ‌ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *